"ಆಸ್ಪತ್ರೆಯಲ್ಲಿ ರೋಗಿಗಳಿಂದ ಯಾವುದೇ ಕಾರಣಕ್ಕೂ ಹಣ ಪಡೆಯಬಾರದು ಮತ್ತು ಹೊರಗಿನಿಂದ ಔಷಧಿಗಳನ್ನು ತರುವಂತೆ ವೈದ್ಯರು ಬರೆದುಕೊಡಬಾರದು. ಈ ಬಗ್ಗೆ ಅಧಿಕಾರಿಗಳು ತೀವ್ರ ನಿಗಾ ವಹಿಸಬೇಕು." - ನ್ಯಾಯಮೂರ್ತಿ ಬಿ. ವೀರಪ್ಪ, ಉಪ ಲೋಕಾಯುಕ್ತರುರೋಗಿಗಳ ಜತೆ ಸಂವಾದ ಮತ್ತು ಮುನ್ನೆಚ್ಚರಿಕೆ: ಒಳರೋಗಿಗಳ ವಿಭಾಗ, ತೀವ್ರ ನಿಗಾ ಘಟಕ (ICU) ಹಾಗೂ ಪ್ರಸೂತಿ ವಿಭಾಗಗಳಿಗೆ ಭೇಟಿ ನೀಡಿದ ಉಪ ಲೋಕಾಯುಕ್ತರು, ದಾಖಲಾದ ರೋಗಿಗಳ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದರು. ಪೌಷ್ಟಿಕ ಆಹಾರ ಸೇವಿಸುವಂತೆ ಸಲಹೆ ನೀಡಿದ ಅವರು, ಗಾಯಾಳು ರೋಗಿಯೊಬ್ಬರಿಗೆ ತಕ್ಷಣವೇ ತುರ್ತು ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸ್ಥಳದಲ್ಲೇ ಸೂಚಿಸಿದರು. ಅಲ್ಲದೆ, ಬಿಮ್ಸ್ ರಕ್ತ ಭಂಡಾರಕ್ಕೆ ಭೇಟಿ ನೀಡಿ ವಿವಿಧ ರಕ್ತದ ಗುಂಪುಗಳ ದಾಸ್ತಾನು ಸ್ಥಿತಿಗತಿಗಳನ್ನು ಪರಿಶೀಲಿಸಿದರು. ಈ ದಿಢೀರ್ ಭೇಟಿಯ ಸಂದರ್ಭದಲ್ಲಿ ಉಪನಿಬಂಧಕರಾದ ಅರವಿಂದ, ಲೋಕಾಯುಕ್ತ ಎಸ್.ಪಿ. ಪ್ರಸನ್ ದೇಸಾಯಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಎನ್. ಶಿವಕುಮಾರ, ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಬಿಮ್ಸ್ ನಿರ್ದೇಶಕ ವಿನಯ ದಾಸ್ತಿಕೊಪ್ಪ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಆಯ್.ಪಿ. ಗಡಾದ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಬಿಮ್ಸ್ ಆಸ್ಪತ್ರೆಗೆ ಉಪ ಲೋಕಾಯುಕ್ತರ ದಿಢೀರ್ ಭೇಟಿ: ಅವಧಿ ಮೀರಿದ ಲಸಿಕೆ ಪತ್ತೆ, ತನಿಖೆಗೆ ಆದೇಶ
ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ದಿಢೀರ್ ಭೇಟಿ ನೀಡಿದ್ದು, ಲಕ್ಷಾಂತರ ರೂ. ಮೌಲ್ಯದ ಅವಧಿ ಮೀರಿದ ಲಸಿಕೆ ಪತ್ತೆಯಾಗಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚಿಸಿದ್ದಾರೆ.
ಈ ಲೇಖನವನ್ನು ಆಲಿಸಿ TTS AI
B News Desk
Senior Staff Journalist and Correspondent at B News. Covering breaking global stories, contemporary culture, and modern innovations.