ವಿಜಯಪುರದ ಅತಾಲಟ್ಟಿ ಗ್ರಾಮದ ಬಳಿ ತಲೆಮರೆಸಿಕೊಂಡಿದ್ದ ಮುಖ್ಯ ಆರೋಪಿ ಸಮೀರ್ ಮುಲ್ಲಾ ಇರುವಿಕೆಯ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸ್ ತಂಡವು ಆತನನ್ನು ಬಂಧಿಸಲು ತೆರಳಿತ್ತು. ಈ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿ ಸಮೀರ್ ವಿರುದ್ಧ ಆತ್ಮರಕ್ಷಣೆಗಾಗಿ ಪೊಲೀಸರು ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ. ಸದ್ಯ ಗಾಯಗೊಂಡಿರುವ ಸಮೀರ್‌ನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಪ್ರಕರಣದ ಹಿನ್ನೆಲೆ ಮತ್ತು ಹತ್ಯೆಯ ರಹಸ್ಯ:
ಡಿಜೆ ಹಚ್ಚುವ ವಿಚಾರವಾಗಿ ಮೃತ ಯಾಸೀನ್ ಜುಬೇರ್ ಹಾಗೂ ಸಮೀರ್ ನಡುವೆ ಗಲಾಕೆ ನಡೆದಿತ್ತು. ಈ ವೇಳೆ ಸಮೀರ್ ಹಾಗೂ ಆತನ ಆಪ್ತರ ಮೇಲೆ ಯಾಸೀನ್ ಹಲ್ಲೆ ನಡೆಸಿದ್ದ ಎನ್ನಲಾಗಿದೆ. ಈ ದ್ವೇಷವನ್ನು ಮನಸ್ಸಿನಲ್ಲಿಟ್ಟುಕೊಂಡಿದ್ದ ಸಮೀರ್, ಪ್ರತಿಕಾರ ತೀರಿಸಿಕೊಳ್ಳಲು ಕಾಯುತ್ತಿದ್ದ. ಅದರಂತೆ ನವೆಂಬರ್ 5 ರಂದು ತನ್ನ ಪತ್ನಿಯನ್ನ ಆಸ್ಪತ್ರೆಗೆ ಕರೆತಂದಿದ್ದ ಯಾಸೀನ್ ಜುಬೇರ್ ಮೇಲೆ ಸಮೀರ್ ಏಕಾಏಕಿ ಗುಂಡಿನ ದಾಳಿ ನಡೆಸಿದ್ದನು. ಪತ್ನಿಯ ಕಣ್ಮುಂದೆಯೇ ಯಾಸೀನ್ ಸ್ಥಳದಲ್ಲೇ ಮೃತಪಟ್ಟಿದ್ದರು.
ಘಟನೆಯ ಬಳಿಕ ತಲೆಮರೆಸಿಕೊಂಡಿದ್ದ ಹಂತಕ ಸಮೀರ್ ಹಾಗೂ ಆತನ ಸಹಚರರ ಪತ್ತೆಗಾಗಿ ಪೊಲೀಸರು ಒಟ್ಟು 4 ವಿಶೇಷ ತಂಡಗಳನ್ನು ರಚಿಸಿ ತೀವ್ರ ಶೋಧ ನಡೆಸಿದ್ದರು. ಅಂತಿಮವಾಗಿ ಅತಾಲಟ್ಟಿ ಗ್ರಾಮದ ಬಳಿ ಆಪರೇಷನ್ ನಡೆಸಿ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ವಿಜಯಪುರ: ಯಾಸೀನ್ ಜುಬೇರ್ ಹತ್ಯೆ ಪ್ರಕರಣ; ಹಂತಕ ಸಮೀರ್ ಕಾಲಿಗೆ ಗುಂಡು ಹಾರಿಸಿ ಪೊಲೀಸರ ಬಂಧನ
ವಿಜಯಪುರದಲ್ಲಿ ನಡೆದ ಯಾಸೀನ್ ಜುಬೇರ್ ಹತ್ಯೆ ಪ್ರಕರಣದ ಮುಖ್ಯ ಆರೋಪಿ ಸಮೀರ್ ಮುಲ್ಲಾ ಬಂಧನ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದು, ಆತ್ಮರಕ್ಷಣೆಗಾಗಿ ಹಂತಕನ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸಿದ್ದಾರೆ.
ಈ ಲೇಖನವನ್ನು ಆಲಿಸಿ TTS AI
ವಿಜಯಪುರದ ಅತಾಲಟ್ಟಿ ಗ್ರಾಮದ ಬಳಿ ತಲೆಮರೆಸಿಕೊಂಡಿದ್ದ ಮುಖ್ಯ ಆರೋಪಿ ಸಮೀರ್ ಮುಲ್ಲಾ ಇರುವಿಕೆಯ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸ್ ತಂಡವು ಆತನನ್ನು ಬಂಧಿಸಲು ತೆರಳಿತ್ತು. ಈ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿ ಸಮೀರ್ ವಿರುದ್ಧ ಆತ್ಮರಕ್ಷಣೆಗಾಗಿ ಪೊಲೀಸರು ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ. ಸದ್ಯ ಗಾಯಗೊಂಡಿರುವ ಸಮೀರ್‌ನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಪ್ರಕರಣದ ಹಿನ್ನೆಲೆ ಮತ್ತು ಹತ್ಯೆಯ ರಹಸ್ಯ:
ಡಿಜೆ ಹಚ್ಚುವ ವಿಚಾರವಾಗಿ ಮೃತ ಯಾಸೀನ್ ಜುಬೇರ್ ಹಾಗೂ ಸಮೀರ್ ನಡುವೆ ಗಲಾಕೆ ನಡೆದಿತ್ತು. ಈ ವೇಳೆ ಸಮೀರ್ ಹಾಗೂ ಆತನ ಆಪ್ತರ ಮೇಲೆ ಯಾಸೀನ್ ಹಲ್ಲೆ ನಡೆಸಿದ್ದ ಎನ್ನಲಾಗಿದೆ. ಈ ದ್ವೇಷವನ್ನು ಮನಸ್ಸಿನಲ್ಲಿಟ್ಟುಕೊಂಡಿದ್ದ ಸಮೀರ್, ಪ್ರತಿಕಾರ ತೀರಿಸಿಕೊಳ್ಳಲು ಕಾಯುತ್ತಿದ್ದ. ಅದರಂತೆ ನವೆಂಬರ್ 5 ರಂದು ತನ್ನ ಪತ್ನಿಯನ್ನ ಆಸ್ಪತ್ರೆಗೆ ಕರೆತಂದಿದ್ದ ಯಾಸೀನ್ ಜುಬೇರ್ ಮೇಲೆ ಸಮೀರ್ ಏಕಾಏಕಿ ಗುಂಡಿನ ದಾಳಿ ನಡೆಸಿದ್ದನು. ಪತ್ನಿಯ ಕಣ್ಮುಂದೆಯೇ ಯಾಸೀನ್ ಸ್ಥಳದಲ್ಲೇ ಮೃತಪಟ್ಟಿದ್ದರು.
ಘಟನೆಯ ಬಳಿಕ ತಲೆಮರೆಸಿಕೊಂಡಿದ್ದ ಹಂತಕ ಸಮೀರ್ ಹಾಗೂ ಆತನ ಸಹಚರರ ಪತ್ತೆಗಾಗಿ ಪೊಲೀಸರು ಒಟ್ಟು 4 ವಿಶೇಷ ತಂಡಗಳನ್ನು ರಚಿಸಿ ತೀವ್ರ ಶೋಧ ನಡೆಸಿದ್ದರು. ಅಂತಿಮವಾಗಿ ಅತಾಲಟ್ಟಿ ಗ್ರಾಮದ ಬಳಿ ಆಪರೇಷನ್ ನಡೆಸಿ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
B News Desk
Senior Staff Journalist and Correspondent at B News. Covering breaking global stories, contemporary culture, and modern innovations.